Wednesday, June 24, 2026
Homeಕರಾವಳಿಮಂಗಳೂರುವಿಟ್ಲ ಬಸ್ ನಿಲ್ದಾಣದ ಬಳಿ ಮಹಿಳೆಗೆ ಡಿಕ್ಕಿ ಹೊಡೆದ ಬೈಕ್; ಮಹಿಳೆ ಸ್ಥಳದಲ್ಲೇ ಸಾವು

ವಿಟ್ಲ ಬಸ್ ನಿಲ್ದಾಣದ ಬಳಿ ಮಹಿಳೆಗೆ ಡಿಕ್ಕಿ ಹೊಡೆದ ಬೈಕ್; ಮಹಿಳೆ ಸ್ಥಳದಲ್ಲೇ ಸಾವು

- Advertisement -
- Advertisement -

ವಿಟ್ಲ ಬಸ್ ನಿಲ್ದಾಣದ ಬಳಿ ಮಹಿಳೆಗೆ ಡಿಕ್ಕಿ ಹೊಡೆದ ಬೈಕ್ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಮೃತರು. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ,

ಅಪಘಾತದ ನಂತರ ಬೈಕ್ ಸುಮಾರು 50 ಮೀಟರ್ ದೂರ ರಸ್ತೆಯಲ್ಲಿ ಎಳೆಯುತ್ತ ಹೋಗಿ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಗಾಯಗೊಂಡು ಬಿದ್ದಿದ್ದ ಬೈಕ್ ಸವಾರನನ್ನು ಯಾರೂ ಮುಟ್ಟದೆ ಇದ್ದ ಸಂದರ್ಭ ಕಾಶಿಮಠ ನಿವಾಸಿ ಪ್ರತಾಪ್ ಅವರು ಮಾನವೀಯತೆ ಮೆರೆದಿದ್ದು, ತಮ್ಮ ದ್ವಿಚಕ್ರ ವಾಹನದಲ್ಲಿ ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!