Thursday, June 4, 2026
Homeಕರಾವಳಿಮಂಗಳೂರು; ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು

ಮಂಗಳೂರು; ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು; ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರಿನ ಬಳಿ  ನಡೆದಿದೆ. ಸೇವಂತಿಗುಡ್ಡೆಯ ನಿವಾಸಿ ಕೃಷ್ಣಪ್ಪ ಅವರ ಪತ್ನಿ ಬೇಬಿ (65) ಸಾವನ್ನಪ್ಪಿದ ಮಹಿಳೆ.

ಆಡಂಕುದ್ರಿನಲ್ಲಿ ಅಂಗಡಿ ಹೊಂದಿದ್ದ ಅವರು ಸಂಜೆ ಪಂಪ್‌ವೆಲ್‌ನ ಅಪಾರ್ಟ್‌ ಮೆಂಟ್‌ನಲ್ಲಿ ಕೆಲಸಕ್ಕೆ ತೆರಳಲು ರಸ್ತೆ ದಾಟುತ್ತಿದ್ದಾಗ ಘಟನೆ ನಡೆದಿದೆ. ಓವರ್‌ಟೇಕ್‌ ಭರದಲ್ಲಿದ್ದ ತೊಕ್ಕೊಟ್ಟಿನಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಎರಡು ಕಾರುಗಳಲ್ಲಿ ಒಂದು ಕಾರು ಮಹಿಳೆಗೆ ಢಿಕ್ಕಿಯಾಗಿದೆ.ದಕ್ಷಿಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!