Thursday, June 4, 2026
Homeಕರಾವಳಿಮಂಗಳೂರುಮಂಗಳೂರು; ಉಳ್ಳಾಲದಲ್ಲಿ ಸಮುದ್ರ ಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ; ಓರ್ವ ಮಹಿಳೆ ಸಾವು

ಮಂಗಳೂರು; ಉಳ್ಳಾಲದಲ್ಲಿ ಸಮುದ್ರ ಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ; ಓರ್ವ ಮಹಿಳೆ ಸಾವು

- Advertisement -
- Advertisement -

ಮಂಗಳೂರು; ಸಮುದ್ರ ಪಾಲಾಗುತ್ತಿದ್ದ ಮೂವರು ಮಹಿಳೆಯರನ್ನು ರಕ್ಷಣೆ ಮಾಡಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಉಳ್ಳಾಲ ಸಮುದ್ರ ತೀರದಲ್ಲಿ ನಡೆದಿದೆ.

.
ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್. ಪ್ರಸನ್ನ ಅವರ ಪತ್ನಿ ಪರಿಮಿ ರತ್ನ ಕುಮಾರಿ (57) ಮೃತ ದುರ್ದೈವಿ.

ಉಳ್ಳಾಲ ಕಡಲತೀರದಲ್ಲಿ ವಿಹರಿಸುತ್ತಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ನಾಲ್ವರು ಮಹಿಳೆಯರನ್ನು ನೀರು ಪಾಲಾಗಿದ್ದರು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಇವರಲ್ಲಿ ಪರಿಮಿ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದರು. ತಕ್ಷಣ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ.

ಹೈದರಾಬಾದ್‌ನಿಂದ ಐವರು ಮಹಿಳೆಯರು ಜೂನ್ 6ಕ್ಕೆ ವಿಮಾನದ ಮೂಲಕ ಮೈಸೂರಿಗೆ ಬಂದಿಳಿದಿದ್ದರು. ಅಲ್ಲಿ ಪ್ರವಾಸ ಮುಗಿಸಿದ ಅವರು ಕಾರಿನಲ್ಲಿ ಜೂ.7ಕ್ಕೆ ಕೊಡಗಿಗೆ ಹೋಗಿ, ಜೂ.9ಕ್ಕೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ, ಸೋಮವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಉಳ್ಳಾಲ ಸಮುದ್ರ ತೀರ ವಿಹಾರಕ್ಕೆ ಬಂದಿದ್ದರು ಎಂದು ಈ ಪ್ರವಾಸಿ ತಂಡದಲ್ಲಿದ್ದವರು ತಿಳಿಸಿದ್ದಾರೆ.

- Advertisement -

Latest News

error: Content is protected !!