Saturday, June 6, 2026
Homeಕರಾವಳಿಸುಳ್ಯ; ಕಾಡು ಹಣ್ಣಿನ ಜ್ಯೂಸ್ ಕುಡಿದು ಮಹಿಳೆ ಸಾವು; ಅನಾಥವಾದ ಮೂವರು ಮಕ್ಕಳು

ಸುಳ್ಯ; ಕಾಡು ಹಣ್ಣಿನ ಜ್ಯೂಸ್ ಕುಡಿದು ಮಹಿಳೆ ಸಾವು; ಅನಾಥವಾದ ಮೂವರು ಮಕ್ಕಳು

- Advertisement -
- Advertisement -

ಸುಳ್ಯ; ಕಾಡು ಹಣ್ಣಿನ ಜ್ಯೂಸ್ ಕುಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ‌ ಎಂಬಲ್ಲಿ ನಡೆದಿದೆ.  ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ(35) ಮೃತ ದುರ್ದೈವಿ.

ಲೀಲಾವತಿ ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು , ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ತಾವು ಹಾಗೂ ಅವರ ತಂದೆ ಸೇವನೆ ಮಾಡಿದ್ದರು.

ಇದರ ಪರಿಣಾಮವಾಗಿ ತಂದೆ ಮಗಳಿಬ್ಬರೂ ಅಸ್ವಸ್ಥರಾಗಿದ್ದರು. ಅವರಲ್ಲಿ ಮಗಳು ಮೂರು ಮಕ್ಕಳ ತಾಯಿಯಾಗಿರುವ ಲೀಲಾವತಿಯವರಿಗೆ ವಾಂತಿ, ಭೇದಿ ಆರ೦ಭವಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಸೌಖ್ಯ ತೀವ್ರಗೊ೦ಡು ನಿನ್ನೆ ಹೆಚ್ಚಿನ ಚಿಕಿತ್ಸೆಗಾಗಿ ಮ೦ಗಳೂರಿಗೆ ಕೊ೦ಡೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!