Thursday, June 4, 2026
Homeಕರಾವಳಿಉಡುಪಿಕುಂದಾಪುರ; ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಕಾಲು ಜಾರಿ ಬಿದ್ದು ಮಹಿಳೆ ಸಾವು

ಕುಂದಾಪುರ; ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಕಾಲು ಜಾರಿ ಬಿದ್ದು ಮಹಿಳೆ ಸಾವು

- Advertisement -
- Advertisement -

ಕುಂದಾಪುರ; ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಕಾಲು ಜಾರಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ  ಹಳೇ ಗೀತಾಂಜಲಿ ಟಾಕೀಸ್ ಸಮೀಪ ನಡೆದಿದೆ.

ಲಕ್ಷ್ಮೀ ಪ್ರತಾಪ್ ನಾಯಕ್ (41) ಮೃತ ದುರ್ದೈವಿ.  ನಿನ್ನೆ ಸಂಜೆ ಲಕ್ಷ್ನೀ ಳೆ ಫ್ಲ್ಯಾಟಿನ ಮಹಡಿಯ ಮೇಲೆ ಒಣಗಿಸಲು ಹಾಕಿದ್ದ ತೆಂಗಿನಕಾಯಿ ತರಲು ಹೋಗಿದ್ದಾಗ ಆಕಸ್ಮಿಕವಾಗಿ ಮಹಡಿಗೆ ಅಳವಡಿಸಲಾಗಿದ್ದ ಫೈಬರ್ ಶೀಟ್ ಮೇಲೆ ಕಾಲಿಟ್ಟಿದ್ದರಿಂದ ಅದು ತುಂಡಾಗಿ ಎರಡನೇ ಮಹಡಿಯ ಫ್ಲೋರಿಗೆ ಬಿದ್ದರೆನ್ನಲಾಗಿದೆ. ಇದರಿಂದ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!