Friday, May 10, 2024
Homeತಾಜಾ ಸುದ್ದಿಸಂಚರಿಸುತ್ತಿದ್ದ ವಿಮಾನದಲ್ಲಿಯೇ ಹೆಣ್ಣುಮಗುವಿಗೆ ಜನ್ಮ ನೀಡಿದ ಬೆಂಗಳೂರಿನ ಮಹಿಳೆ

ಸಂಚರಿಸುತ್ತಿದ್ದ ವಿಮಾನದಲ್ಲಿಯೇ ಹೆಣ್ಣುಮಗುವಿಗೆ ಜನ್ಮ ನೀಡಿದ ಬೆಂಗಳೂರಿನ ಮಹಿಳೆ

spot_img
- Advertisement -
- Advertisement -

ನವದೆಹಲಿ: ಸಂಚರಿಸುತ್ತಿದ್ದ ವಿಮಾನದಲ್ಲಿಯೇ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರು-ಜೈಪುರ ನಡುವಿನ ವಿಮಾನದಲ್ಲಿ ಇಂದು ಬೆಳಗ್ಗೆ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ.

ಬುಧವಾರ ಬೆಳಿಗ್ಗೆ ಬೆಂಗಳೂರಿನಿಂದ ಜೈಪುರಕ್ಕೆ ಇಂಡಿಗೋ 6E469 ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಇದ್ದಕ್ಕಿದ್ದಂತೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ಸಂದರ್ಭ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆ ಡಾ. ಸುಬಹಾನಾ ನಜೀರ್, ವಿಮಾನ ಸಿಬ್ಬಂದಿ ನೆರವಿನಿಂದ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ವಿಮಾನ ಸಂಚರಿಸುವ ವೇಳೆಯೇ ವೈದ್ಯರು ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವಿಮಾನ ಯಾನ ಸಂಸ್ಥೆ ಹೇಳಿಕೆ ನೀಡಿದೆ.

ಬೆಂಗಳೂರಿನಿಂದ ಬುಧವಾರ ಬೆಳಿಗ್ಗೆ 5.45ಕ್ಕೆ ವಿಮಾನ ಟೇಕ್‌ಆಫ್ ಆಗಿದ್ದು, ಬೆಳಿಗ್ಗೆ 8 ಗಂಟೆಗೆ ಜೈಪುರ ತಲುಪಿದೆ. ವಿಮಾನ ತಲುಪುವ ವೇಳೆಗೆ ಜೈಪುರ ವಿಮಾನ ನಿಲ್ದಾಣದಲ್ಲಿ ಆಂಬುಲೆನ್ಸ ಹಾಗೂ ವೈದ್ಯರ ವ್ಯವಸ್ಥೆ ಮಾಡಲಾಗಿತ್ತು.

ಹೆರಿಗೆ ಮಾಡಿಸಿದ ವೈದ್ಯರನ್ನು ಸ್ವಾಗತಿಸಿ ಇಂಡಿಗೋ ಜೈಪುರ ಸಿಬ್ಬಂದಿ ಧನ್ಯವಾದ ಸಲ್ಲಿಸಿದ್ದಾರೆ.

- Advertisement -
spot_img

Latest News

error: Content is protected !!