Saturday, June 6, 2026
Homeಚಿಕ್ಕಮಗಳೂರುಚಿಕ್ಕಮಗಳೂರು; ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ; ಸುಸೂತ್ರವಾಗಿ ಹೆರಿಗೆ ಮಾಡಿಸಿದ ಮಹಿಳಾ ಕಂಡೆಕ್ಟರ್

ಚಿಕ್ಕಮಗಳೂರು; ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ; ಸುಸೂತ್ರವಾಗಿ ಹೆರಿಗೆ ಮಾಡಿಸಿದ ಮಹಿಳಾ ಕಂಡೆಕ್ಟರ್

- Advertisement -
- Advertisement -

ಚಿಕ್ಕಮಗಳೂರು; ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಮಹಿಳೆ ಜನ್ಮ ನೀಡಿದ ಘಟನೆ ಚಿಕ್ಕಮಗಳೂರಿನ ಉದಯಪುರ ಸಮೀಪ ನಡೆದಿದೆ.

ನಿನ್ನೆ ಬೆಂಗಳೂರಿನಿಂದ ಬೇಲೂರಿಗೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ  ಮಹಿಳೆಗೆ ಚಿಕ್ಕಮಗಳೂರಿನ ಉದಯಪುರ ಸಮೀಪ ಹೆರಿಗೆ ನೋವು ಕಾಣಿಸಿಕೊಂಡಿದೆ. ಹತ್ತಿರದಲ್ಲಿ ಯಾವುದೇ ಆಸ್ಪತ್ರೆ ಹಾಗೇ ಯಾವುದೇ ಸೌಕರ್ಯ ಇಲ್ಲದೇ ಇದ್ದುದರಿಂದ ಬಸ್ಸಿನಲ್ಲಿದ್ದ ಮಹಿಳಾ ನಿರ್ವಾಹಕಿ ವಸಂತಮ್ಮ ಅವರು ಬಸ್  ನಿಲ್ಲಿಸಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರನ್ನು  ಕೆಳಗೆ ಇಳಿಸಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸ್ಸಿನಲ್ಲಿಯೇ ಹೆರಿಗೆಯನ್ನು ಮಾಡಿಸಿದ್ದಾರೆ.

ಇನ್ನು ಮಹಿಳೆಯು ಆರ್ಥಿಕವಾಗಿ ಅಶಕ್ತರಾಗಿರುವ ಕಾರಣ ಮಹಿಳೆಯ ತುರ್ತು ಖರ್ಚಿಗಾಗಿ ಎಲ್ಲಾ ಪ್ರಯಾಣಿಕರಿಂದ ಒಟ್ಟು ರೂ.1500 ಅನ್ನು  ಸಂಗ್ರಹಿಸಿ ಮಹಿಳೆಗೆ ನೀಡಿದ್ದಾರೆ. ಬಳಿಕ ಮಹಿಳೆಯನ್ನು ಆಂಬ್ಯುಲೆನ್ಸ್ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈಗ ಮಹಿಳೆ ಮತ್ತು ಮಗು ಆರೋಗ್ಯವಾಗಿದ್ದಾರೆ. ಇನ್ನು ನಿರ್ವಾಹಿಕಿಯ ಕಾರ್ಯಕ್ಕ ಇದೀಗ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -

Latest News

error: Content is protected !!