Friday, June 5, 2026
Homeಕರಾವಳಿವಿವಾಹಿತೆಗೆ ಮದುವೆಯಾಗುವುದಾಗಿ ಹೇಳಿ ವಂಚನೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ವಿವಾಹಿತೆಗೆ ಮದುವೆಯಾಗುವುದಾಗಿ ಹೇಳಿ ವಂಚನೆ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಸುಬ್ರಹ್ಮಣ್ಯ: ಮದುವೆಯಾಗುತ್ತೇನೆಂದು ನಂಬಿಸಿ ವಿವಾಹಿತಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ  ಲಕ್ಷಾಂತರ ರೂಪಾಯಿ  ವಂಚನೆ ಮಾಡಿದ ಆರೋಪದಡಿ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆ ತನ್ನ ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೇ.20 ರಂದು ರಾತ್ರಿ 10 ಗಂಟೆಗೆ ಪವನ್ ಎಂಬಾತ ಮದ್ಯಪಾನ ಮಾಡಿಕೊಂಡು ಆಕೆಯ ಮನೆಗೆ ಬಂದು ಅತ್ಯಾಚಾರಗೈದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಮಹಿಳೆ ದೂರು ನೀಡಲು ಮುಂದಾದಾಗ ಆತ ಮದುವೆಯಾಗುವುದಾಗಿ ಹೇಳಿ  ವಕೀಲರೊಬ್ಬರ ಮುಖಾಂತರ ಲಿಖಿತ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ.ಇದಕ್ಕಾಗಿ ಆಕೆಯಿಂದ 1,70,000 ರೂಪಾಯಿ ಹಣವನ್ನು ಪಡೆದುಕೊಂಡು ಈಗ ಮದುವೆಯಾಗದೆ ವಂಚನೆ ಮಾಡಿದ್ದಾನೆ ಎಂದು ಆತನ ವಿರುದ್ದ  ಆಕೆ ದೂರು ನೀಡಿದ್ದಾರೆ. ಇದೀಗ ಯುವಕನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!