Thursday, June 25, 2026
Homeಕರಾವಳಿಮೊಬೈಲ್ ನಲ್ಲಿ ಸದಾ ಕಾಲ ಕಳೆಯಬೇಡ ಎಂದ ಪತಿಯ ಕೊಲೆಗೆ ಸುಫಾರಿ ಕೊಟ್ಟ ಪತ್ನಿ

ಮೊಬೈಲ್ ನಲ್ಲಿ ಸದಾ ಕಾಲ ಕಳೆಯಬೇಡ ಎಂದ ಪತಿಯ ಕೊಲೆಗೆ ಸುಫಾರಿ ಕೊಟ್ಟ ಪತ್ನಿ

- Advertisement -
- Advertisement -

ಉತ್ತರಕನ್ನಡ: ಪ್ರತಿ ದಿನ ಮನೆಯಲ್ಲಿ ಮೊಬೈಲ್ ನಲ್ಲಿ ಮುಳುಗಿರಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಪತಿಯನ್ನೇ ಕೊಲ್ಲಲು ಪತ್ನಿ ಸುಪಾರಿ ನೀಡಿ ಸಿಕ್ಕಿಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ದಾಂಡೇಲಿಯ ಅಂಕುಷ ರಾಮಾ ಸುತಾರ ಹತ್ಯೆಗೆ ಸುಪಾರಿ ನೀಡಿದ್ದಕ್ಕಾಗಿ ಪತ್ನಿ ಸರಸ್ವತಿ ಸುತಾರ ಸಿಕ್ಕಿಬಿದ್ದಿದ್ದಾಳೆ.

6 ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಹಲವು ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮನೆಯಲ್ಲಿ ಸಮಯ ಕಳೆಯಲು ಪತ್ನಿ ನೆಂಟರು ಹಾಗೂ ಪರಿಚಯಸ್ಥರೊಂದಿಗೆ ಮೊಬೈಲ್ ನಲ್ಲಿ ಕಾಲಹರಣ ಮಾಡುತ್ತಿದ್ದಳು.

ಗಣೇಶ ಶಾಂತರಾಂ ಇಬ್ಬರು ಬಾಲಕರೊಂದಿಗೆ ಇಂದು ಮನೆಗೆ ಆಗಮಿಸಿದ್ದು, ಮನೆಯಲ್ಲಿದ್ದ ಅಂಕುಷ ರಾಮಾ ಸುತಾರ ನನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದು, ಈತ ಕೂಗಿ ಕೊಂಡಾಗ ಪಕ್ಕದ ಮನೆಯಲ್ಲಿದ್ದ ಸಹೋದರರು ಓಡಿ ಬಂದಿದ್ದಾರೆ. ಈ ವೇಳೆ ಹತ್ಯೆ ಮಾಡಲು ಬಂದಿದ್ದ ಇಬ್ಬರು ಅಪ್ರಾಪ್ತರು ಓಡಿಹೋಗಿದ್ದು, ಸುಪಾರಿ ತೆಗೆದುಕೊಂಡ ಗಣೇಶ್ ಶಾಂತರಾಂ ಸಿಕ್ಕಿಬಿದ್ದಿದ್ದಾನೆ.

ಘಟನೆ ಸಂಬಂಧ ದಾಂಡೇಲಿಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಸ್ವತಿ ಸುತಾರ ಮತ್ತು ಬೆಳಗಾವಿ ಮೂಲದ ಗಣೇಶ ಶಾಂತರಾಂ ಪಾಟೀಲ್ ನನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!