Sunday, June 7, 2026
Homeಕರಾವಳಿಬಂಟ್ವಾಳ: ತಾನು ಹೋಗಬೇಕಾದ ರೈಲು ಬಿಟ್ಟು, ನಿಲ್ದಾಣದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯ ಜೀವ ಉಳಿಸಿದ ಉಪನ್ಯಾಸಕಿ

ಬಂಟ್ವಾಳ: ತಾನು ಹೋಗಬೇಕಾದ ರೈಲು ಬಿಟ್ಟು, ನಿಲ್ದಾಣದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯ ಜೀವ ಉಳಿಸಿದ ಉಪನ್ಯಾಸಕಿ

- Advertisement -
- Advertisement -

ಬಂಟ್ವಾಳ: ಬೆಂಗಳೂರಿಗೆ ಹೊರಟಿದ್ದ ಉಪನ್ಯಾಸಕಿಯೊಬ್ಬರುತಮ್ಮ ಪ್ರಯಾಣವನ್ನು ಮೊಟಕುಗೊಳಿಸಿ ಅಸ್ವಸ್ಥ ವ್ಯಕ್ತಿಯೊಬ್ಬರ ಜೀವ ಉಳಿಸಿದ ಘಟನೆ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ನೆಲ್ಯಾಡಿ ಮೂಲದ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಬಿ.ಸಿ.ರೋಡು ನಿವಾಸಿ ಹೇಮಾವತಿ ಅವರು ಸೆ. 28ರ ರಾತ್ರಿ ಬಂಟ್ವಾಳದಿಂದ ಬೆಂಗಳೂರಿನಲ್ಲಿರುವ ಮಗಳ ಮನೆಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದರು. ರೈಲು ಆಗಮಿಸುವಷ್ಟರಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಗೊಂಡು ಬಿದ್ದಿದ್ದಾರೆ. ತಕ್ಷಣ ರಕ್ಷಣೆಗೆ ಮುಂದಾದ ಉಪನ್ಯಾಸಕಿ ತಾವು ಹೋಗಬೇಕಿದ್ದ ರೈಲನ್ನು ರಿಕ್ಷಾ ಮೂಲಕ ಆ ವ್ಯಕ್ತಿಯನ್ನು ಬಿ.ಸಿ.ರೋಡಿನ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.

 ಬಳಿಕ ಆ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಯಿತು.

ಮರುದಿನ ಬೆಳಗ್ಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆ ವ್ಯಕ್ತಿಯ ಆರೋಗ್ಯ ವಿಚಾರಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ತೆರಳಿದ್ದರು. ಈ ವಿಚಾರ ಇಲ್ಲಿಗೆ ಮುಕ್ತಾಯಗೊಂಡು ಹೆಚ್ಚು ಸುದ್ದಿಯಾಗಿರಲಿಲ್ಲ. ಆದರೆ ಅ. 17ರಂದು ಹೇಮಾವತಿ ಅವರು ತಮ್ಮ ತಾಯಿಯನ್ನು ಕರೆದುಕೊಂಡು ಮಂಗಳೂರು ಕೆಎಂಸಿ ಆಸ್ಪತ್ರೆಯ ಡಾ| ಪದ್ಮನಾಭ ಕಾಮತ್‌ ಅವರ ಬಳಿಗೆ ಬಂದಿದ್ದರು. ಅದೇ ಸಮಯದಲ್ಲಿ ಅಂದು ತನ್ನಿಂದ ರಕ್ಷಿಸಲ್ಪಟ್ಟ ವ್ಯಕ್ತಿಯೂ ಚೇತರಿಸಿಕೊಂಡು ವೈದ್ಯರ ಬಳಿಗೆ ಬಂದಿದ್ದರು. ಆ ವ್ಯಕ್ತಿಯು ಡಾ| ಕಾಮತ್‌ ಅವರ ಬಳಿ ತನ್ನನ್ನು ಕಾಪಾಡಿದ್ದು ಎಂದು ವೈದ್ಯರಿಗೆ ಪರಿಚಯಿಸಿದರು. ಕೂಡಲೇ ಡಾ| ಕಾಮತ್‌ ಅವರು ಉಪನ್ಯಾಸಕಿಯ ಮಾನವೀಯ ಕಾರ್ಯವನ್ನು ಮೆಚ್ಚಿ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದ್ದಾರೆ.

- Advertisement -

Latest News

error: Content is protected !!