Thursday, June 4, 2026
Homeಕರಾವಳಿಮಡಿಕೇರಿಯಿಂದ ನಾಪತ್ತೆಯಾಗಿದ್ದ ಮುಸ್ಲಿಂ ಮಹಿಳೆ ಕಡಬದಲ್ಲಿ ಪತ್ತೆ

ಮಡಿಕೇರಿಯಿಂದ ನಾಪತ್ತೆಯಾಗಿದ್ದ ಮುಸ್ಲಿಂ ಮಹಿಳೆ ಕಡಬದಲ್ಲಿ ಪತ್ತೆ

- Advertisement -
- Advertisement -

ಕಡಬ:ಮಡಿಕೇರಿಯಿಂದ ನಾಪತ್ತೆಯಾಗಿದ್ದ ಮುಸ್ಲಿಂ ಮಹಿಳೆಯೊಬ್ಬರು ಕಡಬದ ನೆಟ್ಟಣದಲ್ಲಿ ಪತ್ತೆಯಾಗಿದ್ದಾರೆ.

ಮಡಿಕೇರಿಯ ನಿವಾಸಿಯಾಗಿರುವ ಮಹಿಳೆಯೊಬ್ಬರು ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದರು. ಬಳಿಕ ಅಲ್ಲಿಂದ ನಾಪತ್ತೆಯಾಗಿದ್ದರು. ಹೀಗೆ ಮಡಿಕೇರಿಯಿಂದ ಹೊರಟ ಮಹಿಳೆ ಸುಳ್ಯಕ್ಕೆ ಬಂದಿದ್ದಾರೆ. ಅಲ್ಲಿಂದ ಕಡಬದ ನೆಟ್ಟಣ ಮೂಲದ ಮುಸ್ಲಿಂ ಮಹಿಳೆಯೊಬ್ಬರು ಆಕೆಯನ್ನು ಮನೆ ಕೆಲಸಕ್ಕೆಂದು ನೆಟ್ಟಣಕ್ಕೆ ಕರೆ ತಂದಿದ್ದಾರೆ.

ಅತ್ತ ಮಹಿಳೆ ನಾಪತ್ತೆಯಾಗುತ್ತಿದ್ದಂತೆ ಆಕೆಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಆಗ ಮಹಿಳೆ ನೆಟ್ಟಣದಲ್ಲಿರುವುದನ್ನು ಪತ್ತೆ ಹಚ್ಚಿದ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ಮಡಿಕೇರಿಗೆ ಕರೆದೊಯ್ದಿದ್ದು, ತನಿಖೆ ಮುಂದುವರೆಸಿದ್ದಾರೆ.

- Advertisement -

Latest News

error: Content is protected !!