Saturday, June 6, 2026
Homeಕರಾವಳಿಉಪ್ಪಿನಂಗಡಿಯಲ್ಲಿ ಮಹಿಳೆ ನಾಪತ್ತೆ

ಉಪ್ಪಿನಂಗಡಿಯಲ್ಲಿ ಮಹಿಳೆ ನಾಪತ್ತೆ

- Advertisement -
- Advertisement -

ಉಪ್ಪಿನಂಗಡಿ: ಮಹಿಳೆಯಬ್ಬರು  ನಾಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ   ಬಿಳಿಯೂರು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕಾನ ಮನೆ ನಿವಾಸಿ ಶ್ವೇತಾ (24) ಎಂಬವರು ಎ. 24 ರಿಂದ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಅಣ್ಣು ಮೇರ ಎಂಬವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಾಣೆಯಾದಾಕೆ ವಿವಾಹಿತೆಯಾಗಿದ್ದು, ಗಂಡನ ಮನೆಯಲ್ಲಿ ಸರಿ ಬಾರದೇ ತವರು ಮನೆಗೆ ಬಂದಿದ್ದರು. ಏಪ್ರಿಲ್ 24 ರ ಸಂಜೆಯಿಂದ ಅವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಈಕೆ ಕನ್ನಡ ಹಾಗೂ ತುಳು ಭಾಷೆಯನ್ನು ಮಾತನಾಡುವ, ಸಾದಾರಣ ಕಪ್ಪು ಮೈ ಬಣ್ಣದವರಾಗಿದ್ದು, ಎಲ್ಲಿಯಾದರೂ ಕಂಡಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!