Saturday, June 6, 2026
Homeಕರಾವಳಿಸುರತ್ಕಲ್ ನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ 

ಸುರತ್ಕಲ್ ನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ 

- Advertisement -
- Advertisement -

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಕೊಪ್ಪಳ ಮೂಲದ ಹನುಮಂತ ಎಂಬವರ ಪತ್ನಿ ಭಾರತಿ ಹಾಗೂ 11 ವರ್ಷದ ಮಗಳು ಹಾಗೂ 9 ವರ್ಷದ ಮಗ ನಾಪತ್ತೆಯಾಗಿರುವುದಾಗಿ ಹನುಮಂತ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ಹನುಮಂತ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಕಾಟಿಪಳ್ಳದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. “ಮಾ.21ರಂದು ರಾತ್ರಿ 8 ಗಂಟೆಯ ಸುಮಾರಿಗೆ ನಾನು ಮಲಗಿದ್ದ ವೇಳೆ ನನ್ನ ಪತ್ನಿ ಭಾರತಿ ಮಾದರ ಮತ್ತು 11 ವರ್ಷದ ಮಗಳು ಹಾಗೂ 9 ವರ್ಷದ ಮಗನೊಂದಿಗೆ ಹೊರಗಿನಿಂದ ಚಿಲಕ ಹಾಕಿ ಹೋದವರು ವಾಪಸ್ ಹಿಂದಿರುಗಿ ಬಂದಿಲ್ಲ” ಎಂದು ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಪೊಲೀಸರು ಭಾರತಿ ಮತ್ತು ಅವರ ಮಕ್ಕಳ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.

- Advertisement -

Latest News

error: Content is protected !!