Saturday, May 4, 2024
Homeಕರಾವಳಿಉಡುಪಿಮಲ್ಪೆ ಬೀಚ್‌ನಲ್ಲಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ರಕ್ಷಣೆ

ಮಲ್ಪೆ ಬೀಚ್‌ನಲ್ಲಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ರಕ್ಷಣೆ

spot_img
- Advertisement -
- Advertisement -

ಉಡುಪಿ : ಮಲ್ಪೆ ಬೀಚ್‌ನಲ್ಲಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯೊಬ್ಬರನ್ನು ಲೈಫ್‌ಗಾರ್ಡ್ ತಂಡ ರಕ್ಷಿಸಿರುವ ಘಟನೆ ಇಂದು ಸಂಜೆ ನಡೆದಿದೆ.

30 ವರ್ಷ ಪ್ರಾಯದ ಮಹಿಳೆಯೊಬ್ಬರು ಮಲ್ಪೆ ಬೀಚ್‌ಗೆ ತನ್ನ ಮಗನೊಂದಿಗೆ ಬಂದಿದ್ದು, ಅಲ್ಲಿ ಆತ್ಮಹತ್ಯೆ ಮಾಡುವ ಉದ್ದೇಶದಿಂದ ಆ ಮಹಿಳೆ ಸಮುದ್ರದತ್ತ ಓಡುತ್ತಿದ್ದರೆನ್ನಲಾಗಿದೆ.

ಇದನ್ನು ಗಮನಿಸಿದ ಜೀವರಕ್ಷಕ ದಳದವರು ತಕ್ಷಣವೇ ಆ ಮಹಿಳೆಯನ್ನು ರಕ್ಷಿಸಿ ತೀರಕ್ಕೆ ಕರೆತಂದರು. ಘಟನೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಬಳಿಕ ಆ ಮಹಿಳೆ ಮತ್ತು ಮಗನನ್ನು ಜೀವರಕ್ಷಕ ದಳದವರು ಮಲ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -
spot_img

Latest News

error: Content is protected !!