Thursday, May 16, 2024
Homeಕರಾವಳಿಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಲಿಫ್ಟ್ ನಲ್ಲಿ ಸಿಲುಕಿ ಹಾಕಿಕೊಂಡ ಮಹಿಳೆ

ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಲಿಫ್ಟ್ ನಲ್ಲಿ ಸಿಲುಕಿ ಹಾಕಿಕೊಂಡ ಮಹಿಳೆ

spot_img
- Advertisement -
- Advertisement -

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್ ನಲ್ಲಿ ಮಹಿಳೆಯೊಬ್ಬರು ಸಿಲುಕಿ ಹಾಕಿಕೊಂಡ ಘಟನೆ  ಇಂದು ಬೆಳಗ್ಗೆ ಮಂಗಳೂರಿನಲ್ಲಿ  ನಡೆದಿದೆ.

ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವಾಣಿ (43) ಲಿಫ್ಟ್ ನಲ್ಲಿ  ಸಿಲುಕಿ ಹಾಕಿಕೊಂಡ ಮಹಿಳೆ.

ಬೆಳಗ್ಗೆ 8 ಗಂಟೆಯ ಸುಮಾರಿಗೆ ವಾಣಿ ಅವರು ಲಿಫ್ಟ್‌ ಬಳಸುವಾಗ ದಿಢೀರ್‌ನೇ ಸ್ಥಗಿತಗೊಂಡಿದೆ. ನಂತರ ವಿಷಯ ಅಗ್ನಿಶಾಮಕ‌ ದಳದ ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಲಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಯಂತ್ರ ಬಳಸಿ ಲಿಫ್ಟ್ ನ ಬಾಗಿಲನ್ನು ಕತ್ತರಿಸಿದ್ದಾರೆ. 30 ನಿಮಿಷಗಳ ಕಾರ್ಯಾಚರಣೆ ನಂತರ ಲಿಫ್ಟ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ಯಶಸ್ವಿಯಾಗಿ ರಕ್ಷಿಸಲಾಯಿತು.

- Advertisement -
spot_img

Latest News

error: Content is protected !!