Friday, June 5, 2026
Homeಕರಾವಳಿಉಡುಪಿಉಡುಪಿ: ಮೊಬೈಲ್ ಕದ್ದು ಪರಾರಿಗೆ ಯತ್ನ; ಕಳ್ಳಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಉಡುಪಿ: ಮೊಬೈಲ್ ಕದ್ದು ಪರಾರಿಗೆ ಯತ್ನ; ಕಳ್ಳಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

- Advertisement -
- Advertisement -

ಉಡುಪಿ: ಮೊಬೈಲ್ ಫೋನ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಯರ ಗ್ಯಾಂಗ್ ನಲ್ಲಿದ್ದ ಮಹಿಳೆಯೊಬ್ಬಳು ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಮಹಿಳಾ ಕಳ್ಳಿಯರ ತಂಡದಿಂದ ಮೊಬೈಲ್ ಫೋನ್ ಕಳ್ಳತನಕ್ಕೆ ಯತ್ನ ನಡೆದಿದೆ.

ಈ ವೇಳೆ ಓರ್ವ ಕಳ್ಳಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಥಳಿಸಲ್ಪಟ್ಟಿದ್ದು, ಗ್ಯಾಂಗ್ ನಲ್ಲಿದ್ದ ಇಬ್ಬರು ಕಳ್ಳಿಯರು ತಪ್ಪಿಸಿಕೊಂಡಿದ್ದಾರೆ.ಬಸ್ ಹತ್ತುವ ವೇಳೆ ಮೊಬೈಲ್ ಫೋನ್ ಕದ್ದು ಪರಾರಿಯಾಗಲು ಯತ್ನಿಸಿದ್ದು, ಓರ್ವಳನ್ನು ಹಿಡಿದು ಥಳಿಸಿದ ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest News

error: Content is protected !!