Thursday, June 4, 2026
Homeತಾಜಾ ಸುದ್ದಿಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಳಗಾವಿ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಕಾರಿನಲ್ಲಿ ತೆರಳುತ್ತಿದ್ದು ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರ್ ಅಪಘಾತಕ್ಕೀಡಾಗಿದೆ. ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರ್ ಮುಂಭಾಗ ನಜ್ಜುಗುಜ್ಜಾಗಿದೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಾಖಲಾಗಿದ್ದಾರೆ.

- Advertisement -

Latest News

error: Content is protected !!