Sunday, May 26, 2024
Homeಕರಾವಳಿಉಡುಪಿಕಾಪು: ಶಾಸಕ ಲಾಲಾಜಿ ಆರ್‌ ಮೆಂಡನ್ ನಿಗಮ-ಮಂಡಳಿ ನೇಮಕಾತಿ ಆದೇಶ ವಾಪಸ್

ಕಾಪು: ಶಾಸಕ ಲಾಲಾಜಿ ಆರ್‌ ಮೆಂಡನ್ ನಿಗಮ-ಮಂಡಳಿ ನೇಮಕಾತಿ ಆದೇಶ ವಾಪಸ್

spot_img
- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯ ಬಿಜೆಪಿ ಶಾಸಕರ ಭಿನ್ನಮತ ಶಮನಕ್ಕಾಗಿ 24 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಆದ್ರೇ ನಿಗಮ-ಮಂಡಳಿ ನೇಮಕಾತಿ ಬಳಿಕ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಪೋಟಗೊಂಡಿತ್ತು. ಹೀಗಾಗಿ ನಾಲ್ವರು ಶಾಸಕರ ನಿಗಮ-ಮಂಡಳಿಯ ನೇಮಕಾತಿಯನ್ನು ರದ್ದು ಪಡಿಸಿ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕಾಪು ಶಾಸಕ ಲಾಲಾಜಿ ಆರ್‌ ಮೆಂಡನ್‌, ಕನಕಗಿರಿ ಶಾಸಕ ಬಸವರಾಜ್‌ ದಢೇಸೂರ್ ಅವರಿಗೆ ನೀಡಲಾಗಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ಹಿಂಪಡೆಯಲಾಗಿದ್ದು, ಆ ಸ್ಥಾನಗಳಿಗೆ ಬೇರೆಯವರ ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ದಿನಾಂಕ 26-07-2020ರಂದು ಹೊರಡಿಸಿರುವ ಟಿಪ್ಪಣಿಯಲ್ಲಿ ಮೇಲ್ಕಂಡ ಹೆಸರುಗಳನ್ನು ಕೂಡಲೇ ಹಿಂಪಡೆಯಲು ಸೂಚಿಸಿದೆ ಎಂಬುದಾಗಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!