- Advertisement -
- Advertisement -
ಮಂಗಳೂರು: ಕಾಮಗಾರಿ ವೇಳೆ ಮಣ್ಣು ಕುಸಿತವಾಗಿ ಓರ್ವ ಕಾರ್ಮಿಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಗುತ್ತಿಗೆದಾರ ಸೇರಿ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಅನಾಹುತದಲ್ಲಿ ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ. ಅಲ್ಲದೇ ಕಟ್ಟಡ ಕಾಮಗಾರಿಯ ಗುತ್ತಿಗೆದಾರರು ₹ 2 ಲಕ್ಷ ಪರಿಹಾರ ವಿತರಿಸಿದ್ದಾರೆ ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಂಡಳಿ ಮೃತ ಕಾರ್ಮಿಕನ ಪತ್ನಿ ಕಿರಣ ದೇವಿ ಅವರಿಗೆ ಪರಿಹಾರದ ಚೆಕ್ ನೀಡಿದ್ದಾರೆ. ಇನ್ನು ಕಾರ್ಮಿಕ ಪರಿಹಾರ ಕಾಯಿದೆಯಡಿಯಲ್ಲಿಯೂ ಕಾರ್ಮಿಕರ ಕುಟುಂಬಕ್ಕೆ ವಿಮಾ ಮೊತ್ತ ದೊರಕಲಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
- Advertisement -