Thursday, July 16, 2026
Homeಉತ್ತರ ಕನ್ನಡಭಟ್ಕಳದಲ್ಲಿ ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವು

ಭಟ್ಕಳದಲ್ಲಿ ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವು

- Advertisement -
- Advertisement -

ಕಾರವಾರ:  ಭಾರೀ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ.

ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು, ಮನೆ ಸಂಪೂರ್ಣ ನೆಲಸಮವಾಗಿದೆ. ದುರಂತದಲ್ಲಿ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಲಕ್ಷ್ಮಿ ನಾರಾಯಣ ನಾಯ್ಕ, ಮಗ ಅನಂತ ನಾರಾಯಣ ನಾಯ್ಕ್, ಮಗಳು ಲಕ್ಷ್ಮಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಜೆಸಿಬಿ ಮೂಲಕ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲಿಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Latest News

error: Content is protected !!