Saturday, July 18, 2026
Homeಕರಾವಳಿಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಬಳಿ ಗುಡ್ಡ ಪ್ರದೇಶದಲ್ಲಿ ಭಾರೀ ಬಿರುಕು; ರಾತ್ರಿ ವಾಹನ ಸಂಚಾರ...

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಬಳಿ ಗುಡ್ಡ ಪ್ರದೇಶದಲ್ಲಿ ಭಾರೀ ಬಿರುಕು; ರಾತ್ರಿ ವಾಹನ ಸಂಚಾರ ಸ್ಥಗಿತ

- Advertisement -
- Advertisement -

ಕೊಡಗು: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಗ್ರಾಮದ ಗುಡ್ಡ ಪ್ರದೇಶದಲ್ಲಿ ಭಾರೀ ಬಿರುಕುಗಳು ಕಾಣಿಸಿಕೊಂಡಿದ್ದು, ಮಣ್ಣು ಕುಸಿತದೊಂದಿಗೆ ಸಂಪರ್ಕ ಕಡಿತದ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 9 ಗಂಟೆಯಿಂದ ನಾಳೆ ಬೆಳಗ್ಗೆ 6-30 ರವರೆಗೆ ವಾಹನ ಸಂಚಾರ ನಿಷೇಧಿಸಿ ಕೊಡಗು ಡಿಸಿ ಡಾ‌ ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ.

ಕಳೆದ ಒಂದು ತಿಂಗಳಿಗೂ ಹೆಚ್ಚಿನ ಅವಧಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಮಡಿಕೇರಿ ಸಮೀಪದ ಮದೆನಾಡು ಗ್ರಾಮದ ಕರ್ತೋಜಿ ಎಂಬಲ್ಲಿ, ರಸ್ತೆ ಪಕ್ಕದ ಗುಡ್ಡದಲ್ಲಿ ಭಾರೀ ಬಿರುಕು ಮೂಡಿದೆ.ಇದರಿಂದ ಗುಡ್ಡ ಕುಸಿಯುವ ಭೀತಿ ಎದುರಾಗಿದೆ.

- Advertisement -

Latest News

error: Content is protected !!