- Advertisement -
![]()
- Advertisement -
ಮಂಗಳೂರು: ಕರಾವಳಿಯಲ್ಲಿ ವರುಣನ ರೌದರಾವತಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಲ್ಲಲ್ಲಿ ಮಣ್ಣು ಕುಸಿತ ಪ್ರಕರಣಗಳು ಕಂಡು ಬರುತ್ತಿವೆ.ಏರ್ಪೋರ್ಟ್ ರನ್ವೇ ಬದಿಯಲ್ಲೇ ರಸ್ತೆ ಕುಸಿದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅದ್ಯಪಾಡಿ ಬಳಿ ಇರುವ ರನ್ ವೇ ಸಮೀಪ ಕುಸಿತವಾಗಿದ್ದು, ಈ ಹಿನ್ನೆಲೆ ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ ಬಂದ್ ಮಾಡಲಾಗಿದೆ.
ಏರ್ರ್ಪೋರ್ಟ್ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕ ಮಳೆ, ನೀರಿನ ಹೊರಹೊಮ್ಮುವಿಕೆಯಿಂದ ಕುಸಿತ ಉಂಟಾಗಿದೆ ಎನ್ನಲಾಗುತ್ತಿದೆ. ನಗರದಲ್ಲಿ ಭಾರೀ ಮಳೆ ಮುಂದುವರೆದಿದೆ. ಮಂಗಳೂರು ವಿಮಾನ ನಿಲ್ದಾಣವು ಸೂಕ್ಷ್ಮ ಟೇಬಲ್ ಟಾಪ್ ರನ್ವೇ ಹೊಂದಿರುವುದರಿಂದ ಈ ವಿದ್ಯಮಾನ ದೇಶದ ಗಮನ ಸೆಳೆದಿದೆ.
- Advertisement -


