- Advertisement -


- Advertisement -
ಮಂಗಳೂರು: ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗರೋಡಿಯ ಮರಿಯಾಲ್ ಹೌಸ್‌ನಲ್ಲಿ ಮುಂಜಾನೆ ಸುಮಾರು 4.45 ರಿಂದ 5 ರ ಅವಧಿಯಲ್ಲಿ ಭಾರಿ ಮಳೆಯಿಂದಾಗಿ ಕಾಂಪೌಂಡ್ ಗೋಡೆಯೊಂದು ಮನೆ ಮೇಲೆ ಕುಸಿದು ಬಿದ್ದಿದೆ. ಪರಿಣಾಮ ಮನೆಯ ಮೇಲ್ಛಾವಣಿ ಕುಸಿದು ಓರ್ವ ಮಹಿಳೆ , ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಬಿಹಾರ ಮೂಲದ ಲಾಲ್ ಬಾಬು ಎಂಬವರ ಇಬ್ಬರು ಹೆಣ್ಣು ಮಕ್ಕಳು ಹಾಗೂ ಉಡುಪಿ ಮೂಲದ ಬಾಲಕೃಷ್ಣ ಎಂಬವರ ಪತ್ನಿ ಶಾಂತಾ (35 ) ಮೃತರು.
ಗಾಯಾಳುಗಳು ಮತ್ತು ಅಸ್ವಸ್ಥರೆಲ್ಲರನ್ನೂ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಇನ್ನು ಈ ಕಾಂಪೌಂಡ್ ಗೋಡೆಯ ಕೆಳಭಾಗದಲ್ಲಿ ಬಾಡಿಗೆ ಮನೆಗಳಲ್ಲಿ 4 ಕುಟುಂಬಗಳು ವಾಸಿಸುತ್ತಿದ್ದವು. ಎಲ್ಲಾ 4 ಮನೆಗಳ ಹಿಂಭಾಗದ ಗೋಡೆಗಳು ಕುಸಿದು ಬಿದ್ದಿದೆ ಎನ್ನಲಾಗಿದೆ
- Advertisement -


