Thursday, June 4, 2026
Homeತಾಜಾ ಸುದ್ದಿದಕ್ಷಿಣ ಅಸ್ಸಾಂನ ವಿವಿಧ ಜಿಲ್ಲೆಗಳಲ್ಲಿ ಭೂಕುಸಿತ; ಕನಿಷ್ಠ 20 ಸಾವು

ದಕ್ಷಿಣ ಅಸ್ಸಾಂನ ವಿವಿಧ ಜಿಲ್ಲೆಗಳಲ್ಲಿ ಭೂಕುಸಿತ; ಕನಿಷ್ಠ 20 ಸಾವು

- Advertisement -
- Advertisement -

ಗೌಹಾತಿ, ಜೂನ್ 02 : ದಕ್ಷಿಣ ಅಸ್ಸಾಂನ ವಿವಿಧ ಜಿಲ್ಲೆಗಳಲ್ಲಿ ಭೂಕುಸಿತದಿಂದಾಗಿ 20 ಜನರು ಮೃತಪಟ್ಟಿದ್ದಾರೆ. ಮಣ್ಣಿನ ಅಡಿ ಇನ್ನೂ ಹಲವರು ಸಿಕ್ಕಿ ಹಾಕಿಕೊಂಡಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಂಗಳವಾರ ಮಧ್ಯಾಹ್ನ ದಕ್ಷಿಣ ಅಸ್ಸಾಂನ ಮೂರು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ. ಈ ಘಟನೆಯಲ್ಲಿ 20 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ದಕ್ಷಿಣ ಅಸ್ಸಾಂನ ಹಲವು ಪ್ರದೇಶಗಳಲ್ಲಿ ಕಳೆದ ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮಣ್ಣಿನ ಅವಶೇಷಗಳ ಅಡಿ ಇನ್ನೂ ಹಲವರು ಸಿಲುಕಿದ್ದಾರೆ. ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭವಾಗಿದೆ. ಕಳೆದ ವಾರದಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗುತ್ತಿದೆ. 9 ಸಾವಿರ ಗ್ರಾಮಸ್ಥರನ್ನು 35 ನಿರಾಶ್ರಿತರ ಶಿಬಿರಗಳಿಗೆ ಕಳುಹಿಸಲಾಗಿದೆ.

- Advertisement -

Latest News

error: Content is protected !!