Saturday, June 29, 2024
Homeತಾಜಾ ಸುದ್ದಿಮಹಾರಾಷ್ಟ್ರದ ರಾಯಗಡದಲ್ಲಿ ಭೂಕುಸಿತ : 36 ಮಂದಿ ಸಾವು!!

ಮಹಾರಾಷ್ಟ್ರದ ರಾಯಗಡದಲ್ಲಿ ಭೂಕುಸಿತ : 36 ಮಂದಿ ಸಾವು!!

spot_img
- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಗ್ರಾಮದಲ್ಲಿ ಭಾರೀ ಭೂಕುಸಿತ ಉಂಟಾಗಿ 36 ಮಂದಿ ಮೃತಪಟ್ಟಿದ್ದಾರೆ.

ಮೂರ್ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಪ್ರವಾಹ ಸೃಷ್ಟಿಯಾಗಿ ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ. ರಾಯಗಢದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವ ಜನರನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ಹೆಲಿಕಾಪ್ಟರ್‌ಗಳನ್ನು ಬಳಸಿ ರಕ್ಷಣೆ ಮಾಡುತ್ತಿದ್ದಾರೆ.

ಗುರುವಾರ ರಾಯಗಢದ ಮೂರು ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಇದುವರೆಗೂ 32 ಮೃತದೇಹಗಳು ಭೂಕುಸಿತವಾದ ಪ್ರದೇಶದಲ್ಲಿ ಸಿಕ್ಕಿವೆ. ಇನ್ನುಳಿದ ನಾಲ್ಕು ಮೃತದೇಹಗಳು ಬೇರೆ ಕಡೆಗಳಲ್ಲಿ ದೊರೆತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ನಡೆಸಲು ಎರಡು ನೌಕಾಪಡೆಯ ರಕ್ಷಣಾ ತಂಡಗಳನ್ನು ರಾಯ್ಗಡ್ ಜಿಲ್ಲೆಯ ಮಹಾದ್ ಮತ್ತು ಐದು ತಂಡಗಳನ್ನು ರತ್ನಾಗಿರಿ ಜಿಲ್ಲೆಯ ಚಿಪ್ಲುನ್‌ಗೆ ಕರೆದೊಯ್ಯಲಾಗಿದೆ ಎನ್ನಲಾಗಿದ್ದು, ಎನ್‌ಡಿಆರ್‌ಎಫ್ ತಂಡಗಳು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಲ್ಲಾ ಪ್ರಯತ್ನ ನಡೆಸುತ್ತಿದ್ದಾವೆ

- Advertisement -
spot_img

Latest News

error: Content is protected !!