Sunday, June 7, 2026
Homeಕರಾವಳಿಮಂಗಳೂರುಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ; ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಸಾವು

ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಪ್ರಕರಣ; ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಸಾವು

- Advertisement -
- Advertisement -

ಮಂಗಳೂರು: ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಉಂಟಾಗಿ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಮೃತ ಕಾರ್ಮಿಕ.

ಮಧ್ಯಾಹ್ನ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಭೂಕುಸಿತ ಉಂಟಾಗಿ ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದರು.ಮಾಹಿತಿ ಗೊತ್ತಾಗುತ್ತಿದ್ದಂತೆ  ಸ್ಥಳಕ್ಕೆ ಅಗ್ನಿಶಾಮಕ ದಳ , ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಕೆಲವು ಗಂಟೆಗಳ ಬಳಿಕ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ನಡುವೆ ಮಣ್ಣಿನಡಿ ಸಿಲುಕಿದ್ದ ಚಂದನ್ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿತ್ತು.

ಆದರೆ ರಿಟೇನಿಂಗ್ ವಾಲ್ ಮತ್ತು ಶೀಟ್ ಗಳ ಮಧ್ಯೆ ಸಿಲುಕಿದ್ದ ಕಾರ್ಮಿಕನ ರಕ್ಷಣೆಗಾಗಿ ರಾತ್ರಿಯ ವರೆಗೂ ಕಾರ್ಯಾಚರಣೆ ನಡೆಸಿದರೂ ಕಾರ್ಮಿಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ .ಸುಮಾರು ಏಳು ಗಂಟೆಯ ವೇಳೆಗೆ ಮೃತದೇಹವನ್ನು ಎನ್ ಡಿ ಆರ್ ಎಫ್ ತಂಡ ಹೊರತೆಗೆದಿದೆ.

- Advertisement -

Latest News

error: Content is protected !!