Saturday, April 27, 2024
Homeಕೊಡಗುಭಾರೀ ಮಳೆಗೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ವಾಹನ ಸವಾರರ ಪರದಾಟ

ಭಾರೀ ಮಳೆಗೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ವಾಹನ ಸವಾರರ ಪರದಾಟ

spot_img
- Advertisement -
- Advertisement -

ಕೊಡಗು: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಹಾಗೇ ಭಾರೀ ಮಳೆಗೆ ಮಡಿಕೇರಿ ತಾಲೂಕಿನ ಮದೆನಾಡು-ಜೋಡುಪಾಲ ನಡುವೆ ರಸ್ತೆಗೆ ಮಣ್ಣು ಕುಸಿದಿದೆ. ಚರಂಡಿಗೆ ಮಣ್ಣು ಬಿದ್ದಿದ್ದರಿಂದ ಅಪಾರ ಪ್ರಮಾಣ ನೀರು ರಸ್ತೆ ಮೇಲೆ ಹರಿಯುತ್ತಿದೆ. ಇನ್ನು ಧಾರಾಕಾರ ಮಳೆ ಜೊತೆ ದಟ್ಟ ಮಂಜು ಆವರಿಸಿದೆ. ಹೀಗಾಗಿ ರಸ್ತೆ ಕಾಣುತ್ತಿಲ್ಲ. ಇದರಿಂದ ದಾರಿಯಲ್ಲಿ ಚಲಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ.

ಸದ್ಯ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿರುವೆ.ಕಾವೇರಿ ನದಿ, ಲಕ್ಷ್ಮಣತೀರ್ಥ, ಪಯಸ್ವಿನಿ ಹಾಗೂ ಅಟ್ಟಿಹೊಳೆ, ಕೀರೆಹೊಳೆ, ತ್ರಿವೇಣಿ ಸಂಗಮ, ಹಾರಂಗಿ ಡ್ಯಾಂ ಭರ್ತಿಯಾದ ಹಿನ್ನೆಲೆ ನದಿ ಪಾತ್ರದ ಜನರು ಎದುರಾಗುವ ಭೀತಿಯಲ್ಲಿದ್ದಾರೆ. ಅರಬ್ಬಿ ಸಮುದ್ರದಲ್ಲಿ ಮೇಲೆ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯಲಿದೆ.

- Advertisement -
spot_img

Latest News

error: Content is protected !!