- Advertisement -
- Advertisement -
ಸುಳ್ಯ; ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪುತ್ತೂರು – ಸುಳ್ಯ ರಸ್ತೆಯ ಶೇಖಮಲೆಯಲ್ಲಿ ರಸ್ತೆಗೆ ಗುಡ್ಡ ಕುಸಿತವಾಗಿದೆ. ಪರಿಣಾಮ ಸುಳ್ಯದಿಂದ ಪುತ್ತೂರಿಗೆ ಹೋಗುವ ವಾಹನ ಸವಾರರು ಹಾಗೂ ಪುತ್ತೂರಿನಿಂದ ಸುಳ್ಯಕ್ಕೆ ಬರುವ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗುಡ್ಡ ಕುಸಿತದಿಂದಾಗಿ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸ್ಥಳದಲ್ಲಿ ಸದ್ಯಕ್ಕೆ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ.
- Advertisement -