Thursday, June 4, 2026
Homeಕರಾವಳಿಉಡುಪಿಬೈಂದೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಮಂಜುನಾಥ ಭಂಡಾರಿ ಕೊನೆಯ ದಿನದ ಪ್ರಚಾರ

ಬೈಂದೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಮಂಜುನಾಥ ಭಂಡಾರಿ ಕೊನೆಯ ದಿನದ ಪ್ರಚಾರ

- Advertisement -
- Advertisement -

ಉಡುಪಿ: ನಾಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರವಾಗಿ ಬೈಂದೂರಿನಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮನೆ ಮನೆ ಪ್ರಚಾರ ನಡೆಸಿದರು.

ನೇರಳಕಟ್ಟೆ, ಕರ್ಕುಂಜೆ ಭಾಗದಲ್ಲಿ ಮತಯಾಚನೆ ಮಾಡಿದ ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.

ಇದೇ ವೇಳೆ ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೊಸಂಗಡಿ ಹಾಗೂ ಎಡಮೊಗೆ ಗ್ರಾಮ ಪಂಚಾಯತ್ ಮುಖಂಡರುಗಳ ಜೊತೆ ಚುನಾವಣಾ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.

ಬೈಂದೂರು ವಿಧಾನಸಭಾ ಕ್ಷೇತ್ರವನ್ನೂ ಒಳಗೊಂಡ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ.

- Advertisement -

Latest News

error: Content is protected !!