- Advertisement -
- Advertisement -
ಬೆಳ್ತಂಗಡಿ: ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆಯವರ ಅಂತ್ಯಕ್ರಿಯೆಯು ಇಂದು ಮೂರು ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನವನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ವಸಂತ ಬಂಗೇರ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಪಡಂಗಡಿ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ಉಪಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಹಿರಿಯ ವಕೀಲ ನೇಮಿರಾಜ್ ಶೆಟ್ಟಿ, ಸೇರಿದಂತೆ ಹಲವಾರು ಉಪಸ್ಥಿತರಿದ್ದರು.
- Advertisement -