Tuesday, June 9, 2026
Homeತಾಜಾ ಸುದ್ದಿದಿವಂಗತ ಡಿಕೆ ರವಿ ಅವರ ಪತ್ನಿ ಕುಸುಮಾ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ !

ದಿವಂಗತ ಡಿಕೆ ರವಿ ಅವರ ಪತ್ನಿ ಕುಸುಮಾ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ !

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ರಂಗೇರುತ್ತಿದೆ. ಎರಡು ಕ್ಷೇತ್ರಗಳ ಉಪ ದಿನಾಂಕ ಘೋಷಣೆ ನಂತರ ಮೂರು ರಾಜಕೀಯ ಪಕ್ಷಗಳ ಚಟುವಟಿಕೆಗಳು ಬಿರುಸುಗೊಂಡಿದೆ. ಅದರಲ್ಲೂ ತೀವ್ರ ಕುತೂಹಲ ಕೆರಳಿಸಿರೊದು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರ. ಈಗ ನಡೆಯುತ್ತಿರುವ ಉಪಚುನಾವಣೆ ಗೆ ಮೂರುಗಳಿಂದ ಅಭ್ಯರ್ಥಿ ಯಾರು ಅನ್ನೋದು ಯಕ್ಷ ಪ್ರಶ್ನೆ ಆಗಿದೆ. ಇಲ್ಲಿ ಸಾಕಷ್ಟು ಚರ್ಚೆ ಆಗುತ್ತಿರುವುದು ಐಎಎಸ್ ಅಧಿಕಾರಿಯಾಗಿದ್ದ ದಿವಂಗತ ಡಿ.ಕೆ. ರವಿ ಅವರ ಪತ್ನಿ ಕುಸುಮಾ ಸ್ಪರ್ಧೆ ವಿಚಾರ. ಕುಸುಮಾ ಸ್ಪರ್ಧೆ ಖಚಿತ ಎಂಬ ಮಾತು ಕೇಳಿಬರುತ್ತಿದೆ.

ರಾಜರಾಜೇಶ್ವರಿ ನಗರ ಉಪ ಚುನಾವಣೆಯ ಕಾಂಗ್ರೆಸ್ ಬಹುತೇಕ ಅಭ್ಯರ್ಥಿ ಎಂಬುದಾಗಿಯೇ ಬಿಂಬಿಸಲಾಗುತ್ತಿರುವಂತ ದಿವಂಗತ ಡಿಕೆ ರವಿ ಅವರ ಪತ್ನಿ, ಕುಸುಮಾ ಅಧಿಕೃತವಾಗಿ ನಾಳೆ ಬೆಳಿಗ್ಗೆ 11 ಗಂಟೆಗೆ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆಯಲಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಯಾವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕು ಎನ್ನುವ ಕುರಿತಂತೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ನೀಡಿದಂತ ವರದಿಯ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ಹೈಕಮಾಂಡ್ ನಿರ್ಧಾರದಂತೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ ಎಂದರು.

- Advertisement -

Latest News

error: Content is protected !!