Wednesday, June 3, 2026
Homeಕರಾವಳಿದಿ. ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ: ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ...

ದಿ. ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ: ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ

- Advertisement -
- Advertisement -

ಬೆಂಗಳೂರು: ಜುಲೈ ತಿಂಗಳಿನಲ್ಲಿ ಹತ್ಯೆಗೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದಿ. ಪ್ರವೀಣ್ ಪತ್ನಿ ನೂತನ ಕುಮಾರಿ ಎಂ. ಅವರಿಗೆ
ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ನೇಮಕಾತಿ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು.

ಕಳೆದ ಜುಲೈ ತಿಂಗಳಿನಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೊಳಗಾಗಿದ್ದರು.

- Advertisement -

Latest News

error: Content is protected !!