Thursday, June 4, 2026
Homeತಾಜಾ ಸುದ್ದಿಹರಪನಹಳ್ಳಿ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್ ಸೇರ್ಪಡೆ

ಹರಪನಹಳ್ಳಿ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ಬೆಂಗಳೂರು : ಹರಪನಹಳ್ಳಿ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಲತಾ ಮಲ್ಲಿಕಾರ್ಜುನ್  ಇಂದು ಅಧಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಜಯ ಗಳಿಸಿರುವ ಲತಾ ಮಲ್ಲಿಕಾರ್ಜುನ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಹ ಸದಸ್ಯರನ್ನಾಗಿ ಅನುಮೋದಿಸಿದೆ ಎಂದಿದ್ದಾರೆ,

ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್‌ ಅವರ ಪುತ್ರಿ ಎಂ.ಪಿ ಲತಾ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ ಕೈತಪ್ಪಿದ ಹಿನ್ನೆಲೆ  ಬಳಿಕ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ 70,194 ಮತಗಳನ್ನು ಪಡೆದು ಬಿಜೆಪಿಯ ಕರುಣಾಕರ ರೆಡ್ಡಿ ವಿರುದ್ಧ 13,845 ಮತಗಳ ಅಂತರದಲ್ಲಿ ಜಯ ಗಳಿಸಿದ್ದರು.

- Advertisement -

Latest News

error: Content is protected !!