Monday, June 8, 2026
Homeಕರಾವಳಿಉಪ್ಪಿನಂಗಡಿ: ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್, ಪೊಲೀಸ್ ಸಹಿತ ಹಲವರಿಗೆ ಗಂಭೀರ ಗಾಯ..!

ಉಪ್ಪಿನಂಗಡಿ: ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್, ಪೊಲೀಸ್ ಸಹಿತ ಹಲವರಿಗೆ ಗಂಭೀರ ಗಾಯ..!

- Advertisement -
- Advertisement -

ಉಪ್ಪಿನಂಗಡಿ: ಪಿಎಫ್ಐ ಸ್ಥಳೀಯ ಮುಖಂಡರುಗಳಾದ ಅಬ್ದುಲ್ ಹಮೀದ್ ಮೆಜೆಸ್ಟಿಕ್, ಮುಸ್ತಫಾ ಕಡವಿನಬಾಗಿಲು, ಝಕರಿಯಾ ಎಂಬುವವರನ್ನು ವಿಚಾರಣೆಯ ನೆಪದಲ್ಲಿ ಪಾಪ್ಯುಲರ್ ಫ್ರಂಟ್ ನಾಯಕರನನ್ನು ಪೊಲೀಸರು ಠಾಣೆಯಲ್ಲಿ ಕೂರಿಸಿ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿದ್ದಿರು.

ಇದೀಗ ರಾತ್ರಿ ಇವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಮುಂಜಾನೆಯಿಂದ ಸಂಜೆವರೆಗೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮಾತುಕತೆ ನಡೆಸಿದ ಬಳಿಕ ಓರ್ವ ಮುಖಂಡರನ್ನು ಪೋಲಿಸರು ಬಿಟ್ಟು ಕಳಿಸಿದ್ದರು.

ಸಂಜೆ ಸ್ಥಳೀಯ ಮಸೀದಿಯಿಂದ ಆಜಾನ್ ಕೇಳಿದೊಡನೆ ಸ್ಥಳದಲ್ಲೇ ನಮಾಜ್ ಮಾಡಲು ಕಾರ್ಯಕರ್ತರು ತಯಾರಿ ನಡೆಸಿದ್ದಾರೆ. ಕುಳಿತುಕೊಳ್ಳಲು ಹಾಕಿದ್ದ ಟರ್ಪಾಲಿನಲ್ಲೇ ನಮಾಜ್ ಮಾಡಲು ಪ್ರಯತ್ನಿಸಿದ್ದಾರೆ ಆಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಸ್ಥಳದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರು ಕೂಡ ಸೇರಿದ್ದು ವಿರೋಧಿ ಘೋಷಣೆ ಕೂಗಿದ್ದಾರೆ. ಯಾವುದೇ ಕಾರಣಕ್ಕೂ ಸ್ಥಳದಲ್ಲಿ ನಮಾಜ್ ಮಾಡಲು ಅವಕಾಶ ನೀಡಬಾರದೆಂದು ಧಿಕ್ಕಾರ ಹಾಕಿದ್ದಾರೆ. ಆಗ ಘರ್ಷಣೆ ಉಂಟಾಗಿದೆ.

ಉಳಿದಿಬ್ಬರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿಸಿದ ಕಾರ್ಯಕರ್ತರ ಮೇಲೆ ರಾತ್ರಿ ಸುಮಾರು 9 ಗಂಟೆಗೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದ ಹಲವಾರು ತೀವ್ರವಾಗಿ ಗಾಯಗೊಂಡರು.

- Advertisement -

Latest News

error: Content is protected !!