Saturday, May 18, 2024
Homeಕರಾವಳಿಮಳಲಿ ಮಸೀದಿ ವಿವಾದ ವಿಚಾರ: ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಭೆ

ಮಳಲಿ ಮಸೀದಿ ವಿವಾದ ವಿಚಾರ: ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಭೆ

spot_img
- Advertisement -
- Advertisement -

ಮಂಗಳೂರು: ಮಳಲಿ ಮಸೀದಿ ವರ್ಸಸ್ ದೇವಸ್ಥಾನ ವಿವಾದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ಸಭೆ ನಡೆಸಿದ್ದಾರೆ.

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಅಲೋಕ್ ಕುಮಾರ್ ನಡೆಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಮಳಲಿ ವಿವಾದ ವಿಚಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಮಳಲಿ ವಿಚಾರ ಸದ್ಯ ಕೋರ್ಟ್ ನಲ್ಲಿದ್ದು,
ಜೂನ್ 3ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಕೋರ್ಟ್ ಆದೇಶ ಇದೆ. ಮಳಲಿ ಪರಿಸರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮಂಗಳೂರು ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಕಾರಣ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು ಪೋಲಿಸರು ಅಗತ್ಯ ಕ್ರಮ ವಹಿಸಿದ್ದಾರೆ‌ ಎಂದು ಹೇಳಿರುವ ಅಲೋಕ್ ಕುಮಾರ್, ಕರಾವಳಿಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!