Saturday, June 6, 2026
Homeಕರಾವಳಿಮಂಗಳೂರು: ಕಾನೂನು ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ..! ಆರೋಪಿ ಶೀಘ್ರದಲ್ಲೇ ಬಂಧನ...!

ಮಂಗಳೂರು: ಕಾನೂನು ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ..! ಆರೋಪಿ ಶೀಘ್ರದಲ್ಲೇ ಬಂಧನ…!

- Advertisement -
- Advertisement -

ಮಂಗಳೂರು: ಕಾನೂನು ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯಾಗಿರುವ ವಕೀಲ ಕೆ.ಎಸ್.ಎನ್ ರಾಜೇಶ್ ಪತ್ತೆಗೆ ಶೋಧ ಕಾರ್ಯ ಮುಂದುವರಿಸಲಾಗಿದ್ದು, ಶೀಘ್ರ ಬಂಧನವಾಗಲಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಆರೋಪಿ ವಿರುದ್ದ ಲುಕ್ ಔಟ್ ನೋಟೀಸ್ ಹೊರಡಿಸಲಾಗಿದೆ. ಬ್ಯಾಂಕ್ ಖಾತೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಆರೋಪಿಯ ಕೃತ್ಯಕ್ಕೆ ಸಹಕಾರ ನೀಡಿದ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣ ಗಂಭೀರವಾಗಿರುವುದರಿಂದ ಆರೋಪಿಗೆ ನಿರೀಕ್ಷಣ ಜಾಮೀನು ನೀಡಬಾರದು ಎಂದು ನ್ಯಾಯಾಲಯಕ್ಕೆ ಕೇಳಿಕೊಳ್ಳಲಾಗಿತ್ತು. ನ್ಯಾಯಾಲಯ ನಿರೀಕ್ಷಣ ಜಾಮೀನು ತಿರಸ್ಕರಿಸಿದೆ. ಹೀಗಾಗಿ ಆರೋಪಿಯನ್ನು ಶೀಘ್ರ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!