Wednesday, June 3, 2026
Homeತಾಜಾ ಸುದ್ದಿ"ಸಂಜನಾರನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ": ಮೌಲ್ವಿ ವಿರುದ್ಧ ದೂರು ದಾಖಲು

“ಸಂಜನಾರನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ”: ಮೌಲ್ವಿ ವಿರುದ್ಧ ದೂರು ದಾಖಲು

- Advertisement -
- Advertisement -

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿಯನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡಿದ್ದ ಮೌಲ್ವಿ ವಿರುದ್ಧ ಕಾಟನ್‌ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಟ್ಯಾನರಿ ರೋಡ್‌ನ ದಾರುಲ್ ಉಲುಮ್ ಶಾ ವಲಿಯುಲ್ಲಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಕಾಟನ್‌ಪೇಟೆ ಠಾಣೆಗೆ ದೂರು ನೀಡಿದ್ದಾರೆ.

ಸಂಜನಾ ಗಲ್ರಾನಿಯವರನ್ನು ಬಲವಂತವಾಗಿ ಮತಾಂತರ ಮಾಡಿಕೊಳ್ಳಲಾಗಿತ್ತು. ಒತ್ತಾಯ ಪೂರ್ವಕವಾಗಿ ಆಕೆಗೆ ಮಹಿರಾ ಹೆಸರನ್ನು ಮರುನಾಮಕರಣ ಮಾಡಲಾಗಿತ್ತು. ಬೆಂಗಳೂರಿನ ಟ್ಯಾನರಿ ರಸ್ತೆಯ ದಾರುಲ್ ಉಲಮ್ ಶಾ ವಲಿಲುಲ್ಲಾ ಹೆಸರಿನ ಮೌಲ್ವಿ ಆಕೆಯನ್ನು ಬಲವಂತವಾಗಿ ಮತಾಂತರ ಮಾಡಿಕೊಂಡಿದ್ದರು ಎಂದು ದೂರು ದಾಖಲಿಸಲಾಗಿದೆ. ಸದ್ಯ, ದೂರು ಸ್ವೀಕರಿಸಿರುವ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ.

ಜೈಲಿನಿಂದ ಬಿಡುಗಡೆ ಬಳಿಕ ಸಂಜನಾ ಅಜ್ಞಾತ ಸ್ಥಳಕ್ಕೆ ಶಿಫ್ಟ್​ ಆಗಿದ್ದಾರೆ. ಸೋಮವಾರ ನಟಿ ಸಂಜನಾ ಮನೆಗೆ ಬರುವ ಮಾಹಿತಿ ಲಭ್ಯವಾಗಿದೆ. ಇಂದಿರಾನಗರದಲ್ಲಿರುವ ತಮ್ಮ ನಿವಾಸಕ್ಕೆ ನಟಿ ಸಂಜನಾ ಬರಲಿದ್ದಾರೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!