Saturday, August 29, 2026
Homeಕರಾವಳಿಮಂಗಳೂರುಬೆಳ್ತಂಗಡಿ : ವಿಚಾರಣೆ ಮುಗಿಸಿ ವಾಪಸ್ ತೆರಳಿದ ಲಾಯರ್ ಜಗದೀಶ್

ಬೆಳ್ತಂಗಡಿ : ವಿಚಾರಣೆ ಮುಗಿಸಿ ವಾಪಸ್ ತೆರಳಿದ ಲಾಯರ್ ಜಗದೀಶ್

- Advertisement -
- Advertisement -

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಧರ್ಮಸ್ಥಳ ನಿವಾಸಿ ಪ್ರಭಾಕರ್ ಗೌಡ ಆ.13 ರಂದು ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ವಿಚಾರಣೆ ರಾತ್ರಿ 9:30 ಕ್ಕೆ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಬೆಳ್ತಂಗಡಿ ಪೊಲೀಸರು ಬೆಂಗಳೂರಿಗೆ ತೆರಳಿ ಕಾರಿನಲ್ಲಿ ಆ.29 ರಂದು ಮಧ್ಯಾಹ್ನ 1:45 ಕ್ಕೆ ಹಾಜರಾಗಿದ್ದರು. ವಾಪಸ್ ಹೋಗುವಾಗ ಯಾವ ಭದ್ರತೆ ಬೇಡವೆಂದು ಪೊಲೀಸರಿಗೆ ಹೇಳಿ ತಮ್ಮ ಖಾಸಗಿ ಭದ್ರತಾ ಸಿಬ್ಬಂದಿ ಜೊತೆ  ಬೆಂಗಳೂರಿಗೆ ಕಾರಿನಲ್ಲಿ ತೆರಳಿದ್ದಾರೆ.

ಇನ್ನು ವಿಚಾರಣೆ ಮುಗಿಸಿ ತೆರಳುವ ವೇಳೆ ಲಾಯರ್ ಜಗದೀಶ್ ಮಹಾಎಕ್ಸ್ ಪ್ರೆಸ್ ಯೂಟ್ಯೂಬ್ ವಾಹಿನಿ ಜೊತೆ ಮಾತನಾಡಿದ್ದು ಅದನ್ನು ನಮ್ಮ ಚಾನೆಲ್ ನಲ್ಲಿ ಪ್ರಸಾರವಾಗಲಿದೆ.

- Advertisement -

Latest News

error: Content is protected !!