Thursday, June 4, 2026
Homeತಾಜಾ ಸುದ್ದಿಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್

ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್

- Advertisement -
- Advertisement -

ಬೆಂಗಳೂರು; ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್ ಆಗಿದ್ದಾರೆ.  ನಿನ್ನೆ ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ನಡೆದ ಗಲಾಟೆ ಕೇಸಿಗೆ ಸಂಬಂಧಪಟ್ಟಂತೆ ಲಾಯರ್ ಜಗದೀಶ್ ಅವರನ್ನು ಅರೆಸ್ಟ್ ಮಾಡಲಾಗಿದೆ.

ನಿನ್ನೆ ಲಾಯರ್ ಜಗದೀಶ್ ಮೇಲೆ ಹಲ್ಲೆಯಾಗಿತ್ತು. ಬಳಿಕ ಅವರಿಗೆ ಚಿಕಿತ್ಸೆ ಕೊಡಿಸಿ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಗದೀಶ್ ಪುತ್ರ ಆರ್ಯನ್, ಇಬ್ಬರು ಗನ್ ಮ್ಯಾನ್ ಗಳನ್ನು ಕೂಡ ಬಂಧಿಸಲಾಗಿದೆ.

ಜಗದೀಶ್ ಅಣ್ಣಮ್ಮನ ಉತ್ಸವದಲ್ಲಿ ಗಲಾಟೆ ಮಾಡಿಕೊಂಡಿದ್ದರು.  ಸ್ಥಳೀಯರು ಹಾಗೂ ಜಗದೀಶ್ ಮಧ್ಯೆ ಗಲಾಟೆ ನಡೆದಿತ್ತು. ಈ ವೇಳೆ ವಕೀಲ ಜಗದೀಶ್ ಗನ್ ಮ್ಯಾನ್ ಫೈರ್ ಮಾಡಿದ್ದರು ಎನ್ನಲಾಗಿದೆ. ಆ ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು.ಈ ವೇಳೆ ರಕ್ತ ಬರೋ ರೀತಿ ಜಗದೀಶ್ ಗೆ ಜನರು ಹೊಡೆದಿದ್ದರು.ಗನ್ ಮ್ಯಾನ್ ಗಳು ಸೇರಿದಂತೆ ಪುತ್ರನಿಗೂ ಪೆಟ್ಟು ಬಿದ್ದಿತ್ತು. ಇದೇ ವಿಚಾರಕ್ಕೆ ಜಗದೀಶ್ ರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!