- Advertisement -
- Advertisement -
ಬಂಟ್ವಾಳ: ಜೆಸಿಐ ಇಂಡಿಯಾದ ವಲಯ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್‌ರವರು ಜವಾಹರ್ ಬಾಲ್ ಮಂಚ್ ನ ದಕ್ಷಿಣ ಕನ್ನಡದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ರಾಷ್ಟ್ರೀಯ ಅಧ್ಯಕ್ಷ ಡಾ. ಹರಿ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇವರು ಕರ್ನಾಟಕ ಸರ್ಕಾರದಿಂದ ಕೊಡಮಾಡುವ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಗೌರವಕ್ಕೆ ಭಾಜನರಾಗಿದ್ದರು. ಅಷ್ಟೇಅಲ್ಲದೆ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ, ರಾಷ್ಟ್ರೀಯ ಬಿಲ್ಲವ ಮಂಡಲದ ಸಂಚಾಲಕಿಯಾಗಿಯೂ ಹೌದು.
- Advertisement -