Saturday, June 6, 2026
Homeಕರಾವಳಿಬಂಟ್ವಾಳ ವಕೀಲರ ಸಂಘದ ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ ವಕೀಲರ ಸಂಘದ ವಾರ್ಷಿಕ ಕ್ರೀಡಾಕೂಟ

- Advertisement -
- Advertisement -

ಬಂಟ್ವಾಳ: ಪಾಣೆ ಮಂಗಳೂರಿನ ಶಾರದಾ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಬಂಟ್ವಾಳ ವಕೀಲರ ಸಂಘದ ವಾರ್ಷಿಕ ಕ್ರೀಡಾಕೂಟ ನಿನ್ನೆ ನಡೆಯಿತು.

ನ್ಯಾಯಾಧೀಶರಾದ ಬಾಲಗೋಪಾಲಕೃಷ್ಣ ಅವರು ದೀಪ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಸಂಜೆ 4 ಗಂಟೆಗೆ ಬಂಟ್ವಾಳದ ಶಾಸಕರಾದ ರಾಜೇಶ್ ನಾಯಕ್ ಉಳಿಪ್ಪಾಡಿ ಅವರು ಕ್ರಿಕೆಟ್ ಫೈನಲ್ ಪಂದ್ಯವನ್ನು ಕ್ರೀಡಾಂಗಣದಲ್ಲಿ ಆಡುವುದರ ಮೂಲಕ ಚಾಲನೆಯನ್ನು ನೀಡಿದರು.

 ಸಂಜೆ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಎಡಿಷನಲ್ ಜನರಲ್ ಅರುಣ್ ಶ್ಯಾಮ್ ಅವರು ಗೆದ್ದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿದರು. ಕ್ರೀಡಾ ಕೂಟದಲ್ಲಿ  ನ್ಯಾಯಾಧೀಶರಾದ ರಮ್ಯಾ H R ಮತ್ತು ಶಿಲ್ಪಾ G ತಿಮ್ಮಾಪುರ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಿ ಗಣೇಶಾನOದ ಸೋಮಯಾಜಿ ವಹಿಸಿದ್ದರು. ಕ್ರೀಡಾ ಕಾರ್ಯದರ್ಶಿ ಸುದರ್ಶನ್ ಕುಮಾರ್ ವಂದಿಸಿದರು. ಗಿರೀಶ್ ಮುಳಿಯಾಲ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ಎಲ್ಲಾ ಹಿರಿಯ ಕಿರಿಯ ವಕೀಲ ಮಿತ್ರರು ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು.

- Advertisement -

Latest News

error: Content is protected !!