- Advertisement -
- Advertisement -
ಮಂಗಳೂರು: ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತಪಡಿಸಿ ವಕೀಲರ ಸಂಘದಿಂದ ಪ್ರತಿಭಟನೆ ನಡೆದಿದೆ.
ಮಂಗಳೂರು ಮತ್ತು ಬಂಟ್ವಾಳ ನ್ಯಾಯಾಲಯದ ಬಳಿ ವಕೀಲರು ಪ್ರತಿಭಟನೆ ನಡೆದಿದೆ.ಮಂಗಳೂರಿನ ಕೋರ್ಟ್ ಆವರಣದಲ್ಲಿ ಮಂಗಳೂರು ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ.
ಕೋರ್ಟ್ ಕಲಾಪಕ್ಕೆ ಅಡ್ಡಿಯಾಗದ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಮೇಲೆ ಪೊಲೀಸ್ ಸಿಬ್ಬಂದಿ ಗುರುಪ್ರಸಾದ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆರಂಭವಾದ ಪ್ರತಿಭಟನೆ ತೀವ್ರ ಕಾವು ಪಡೆದಿದೆ.
- Advertisement -