Wednesday, July 15, 2026
Homeಕರಾವಳಿಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆ: ಸೊತ್ತುಗಳು ಸುಟ್ಟು ಭಸ್ಮ; ಓರ್ವನಿಗೆ ಗಾಯ

ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆ: ಸೊತ್ತುಗಳು ಸುಟ್ಟು ಭಸ್ಮ; ಓರ್ವನಿಗೆ ಗಾಯ

- Advertisement -
- Advertisement -

ಬಂಟ್ವಾಳ: ಇಲ್ಲಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾದದ ಪರಿಣಾಮವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದಾಗಿ ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡಿದ್ದಾನೆ ಎನ್ನಲಾಗಿದೆ.  

ಬೆಂಕಿಯು ಸುಭಾಷ್ ನಗರ ನಿವಾಸಿ ಗಣೇಶ್ ಅವರ ಮನೆಯಲ್ಲಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಯನ್ನು ನಂದಿಸಲು ಹೋದ ಗಣೇಶ್ ಅವರ ಕೈಗೆ ಗಾಯವಾಗಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಬೇಟಿ ನೀಡಿ ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.

ಸುಮಾರು 75 ಸಾವಿರ ರೂ .ನಷ್ಟ ಸಂಭವಿಸಿದ್ದು, ಮನೆಯ ಗ್ಯಾಸ್, ಗೀಸರ್ ಹಾಗೂ ಫ್ರಿಡ್ಜ್ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ. 

- Advertisement -

Latest News

error: Content is protected !!