- Advertisement -
- Advertisement -
ಉಡುಪಿ: ಬ್ರಹ್ಮಾವರ ತಾಲೂಕಿನ ಬಾರ್ಕೂರು ಸಮೀಪದ ಬಂಡಿಮಠದಲ್ಲಿ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ಹಲವು ದಿನಗಳಿಂದ ಬಂಡಿಮಠದಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು
ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಬಂಡಿಮಠ ಗ್ರಾಮಸ್ಥರ ಮನವಿಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿಗೆ ತಡರಾತ್ರಿ ಚಿರತೆ ಬಿದ್ದಿದೆ.ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.
- Advertisement -