Thursday, April 25, 2024
Homeಕರಾವಳಿ“ಪ್ರಕೃತಿಯನ್ನು ದೇವರೆಂದು ಪೂಜಿಸಿ”- ಬಾಲಕೃಷ್ಣ ಆಳ್ವ ಕೊಡಾಜೆ

“ಪ್ರಕೃತಿಯನ್ನು ದೇವರೆಂದು ಪೂಜಿಸಿ”- ಬಾಲಕೃಷ್ಣ ಆಳ್ವ ಕೊಡಾಜೆ

spot_img
- Advertisement -
- Advertisement -

ಬಂಟ್ವಾಳ : ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘ ಮಾಣಿ ಇದರ ವತಿಯಿಂದ, ಮಾಣಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜರುಗಿದ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಪ್ರಕೃತಿಯನ್ನು ದೇವರೆಂದು ಪೂಜಿಸಿ, ತಾಯಿಯೆಂದು ಗೌರವಿಸಿದಾಗ, ಪರಿಸರವನ್ನು ಉಳಿಸುವ ಹೊಣೆಗಾರಿಕೆ ಎಲ್ಲರಿಗೂ ಸಹಜವಾಗಿಯೇ ಬರುತ್ತದೆ ಹೇಳಿದ್ದಾರೆ.
ಸ್ಥಳೀಯಾಡಳಿತವು ಗ್ರಾಮದ ಸ್ವಚ್ಛತೆಗಾಗಿ, ಪ್ಲಾಸ್ಟಿಕ್ ಮುಕ್ತ ಗೊಳಿಸುವುದಕ್ಕಾಗಿ ಬಹಳಷ್ಟು ಜವಾಬ್ದಾರಿಯಿಂದ ಶ್ರಮಪಟ್ಟು ಕಾರ್ಯನಿರ್ವಹಿಸುತ್ತಿದೆ. ಈ ವಿಚಾರದಲ್ಲಿ ಮತ್ತಷ್ಟು ಯಶಸ್ಸನ್ನು ಕಾಣಬೇಕಾದರೆ ಸಾರ್ವಜನಿಕರು ನಮ್ಮ ಜೊತೆ ಕೈಜೋಡಿಸಬೇಕು ಎಂದು ಹೇಳಿದರು.
ಮಾಣಿ ಗ್ರಾಮ ಪಂಚಾಯತ್ ಸದಸ್ಯ ಇಬ್ರಾಹಿಂ.ಕೆ.ಮಾಣಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಉದಯ ಕುಮಾರಿ ಶುಭ ಹಾರೈಸಿದರು.ಪಂಚಾಯತ್ ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್ ವೇದಿಕೆಯಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಸಸಿ ನೆಡುವುದು ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಸಸಿ ವಿತರಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು. ಸೇವಾಪ್ರತಿನಿಧಿ ಲೈಲಾಬಿ ಸ್ವಾಗತಿಸಿದರು. ಒಕ್ಕೂಟದ ಕಾರ್ಯದರ್ಶಿ ವಿಜಯಲಕ್ಷ್ಮಿ ವಂದಿಸಿದರು. ಮೇಲ್ವಿಚಾರಕಿ ವಿನೋದಾ ಕಾರ್ಯಕ್ರಮ ನಿರ್ವಹಿಸಿದರು.

- Advertisement -
spot_img

Latest News

error: Content is protected !!