Thursday, June 4, 2026
Homeತಾಜಾ ಸುದ್ದಿಹುಟ್ಟುಹಬ್ಬದ ದಿನವೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ

ಹುಟ್ಟುಹಬ್ಬದ ದಿನವೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ

- Advertisement -
- Advertisement -

ಚಾಮರಾಜನಗರ: ಹುಟ್ಟುಹಬ್ಬದ ದಿನವೇ ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಸಾವಿಗೂ ಮುನ್ನ ಚಂದನಾ ಬರೆದ ಡೆತ್‌ನೋಟ್ ಸಿಕ್ಕಿದೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಇಂದು(ಆ.9) ಅವರ ಬರ್ತ್​ ಡೇ. ಇಂದೇ ಜೆಎಸ್‌ಎಸ್ ಕಾಲೇಜಿನ ಹಾಸ್ಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್​ನೋಟ್​ ಪತ್ತಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!