ಪುತ್ತೂರು: ವಿದ್ಯಾರ್ಥಿನಿಯರ ನೃತ್ಯಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಕೋಮು ವೈಮನಸ್ಸು ಮೂಡಿಸುವಂತಹ ಪೋಸ್ಟ್ ಹಾಕಿದ್ದರ ಬಗ್ಗೆ ಉಪನ್ಯಾಸಕರೊಬ್ಬರು ದೂರು ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಜೋನ್ಸನ್ ಡೇವಿಡ್ ಸೀಕ್ವೆರಾ ದೂರು ನೀಡಿದವರು.
ಜೋನ್ಸನ್ ಡೇವಿಡ್ ಸೀಕ್ವೆರಾ ಅವರು ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದಾರೆ. ಅವರು ದಿನಾಂಕ 29-08-2025 ರಂದು ತನ್ನ ಮೊಬೈಲ್ ನಲ್ಲಿ ಇನ್ಸ್ಟಾ ಗ್ರಾಮ್ ಖಾತೆಯನ್ನು ಪರಿಶೀಲಿಸುತ್ತಿರುವಾಗ, @tm_bad_karma_990 ಎಂಬ ಇನ್ಸ್ಟ ಗ್ರಾಮ್ ಖಾತೆಯಲ್ಲಿ ಉಪನ್ಯಾಸಕರಾಗಿರುವ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ದಿನಾಂಕ 19-08-2025 ರಂದು ನಡೆದ ನೃತ್ಯ ಕಾರ್ಯಕ್ರಮದಲ್ಲಿ, ಒಂದು ನಿರ್ದಿಷ್ಟ ಸಮುದಾಯದ ವಿಧ್ಯಾರ್ಥಿನಿಯರು ಭಾಗವಹಿಸಿರುವುದರ ಬಗ್ಗೆ ಅಕ್ಷೇಪ ವ್ಯಕ್ತಪಡಿಸುತ್ತಾ, ಧರ್ಮದ ಆಧಾರದಲ್ಲಿ ವಿವಿಧ ಧರ್ಮಗಳ ನಡುವೆ ವೈಮನಸ್ಸನ್ನು ಉಂಟಾಗುವಂತಹ ಹಾಗೂ ಸುಳ್ಳು ಮಾಹಿತಿ ಹೊಂದಿರುವ ಸಂದೇಶವನ್ನು ಹಾಕಿದ್ದನ್ನು ಗಮನಿಸಿದ್ದಾರೆ. ಅಲ್ಲದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿರುವುದು ಕಂಡು ಬಂದಿರುತ್ತದೆ. ಈ ಬಗ್ಗೆ ಡೇವಿಡ್ ಸೀಕ್ವೆರಾ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


