- Advertisement -
- Advertisement -
ಕಡಬ; ಕುಲ್ಕುಂದ ಬಳಿ ಕಾರು-ದ್ವಿಚಕ್ರ ನಡುವೆ ಅಪಘಾತ ಸಂಭವಿಸಿ ಎಸ್.ಎಸ್.ಪಿ.ಯು ಕಾಲೇಜಿನ ಉಪನ್ಯಾಸಕರೊಬ್ಬರಿಗೆ ಗಾಯಗಳಾಗಿವೆ. ಶ್ರೀಧರ ಪುತ್ರನ್ ಗಾಯಗೊಂಡ ಉಪನ್ಯಾಸಕ.ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹ ಸವಾರೆ ಭವ್ಯ ಎಂಬವರು ಸಣ್ಣ ಪುಟ್ಟಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ಎರಡು ಭಾಗವಾಗಿದ್ದು ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಭದ್ರಾವತಿ ಮೂಲದವರಾಗಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದರ್ಶನಕ್ಕೆ ಬರುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.
- Advertisement -