Thursday, June 4, 2026
Homeತಾಜಾ ಸುದ್ದಿವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ

- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಸ್ಥಾನ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾ‌ನ ಎರಡಕ್ಕೂ ಇಂದು ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ.

42 ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿರುವ ಹಿರಿಮೆಯನ್ನು ಬಸವರಾಜ ಹೊರಟ್ಟಿ ಹೊಂದಿದ್ದಾರೆ.

ನಿಯಮದ ಪ್ರಕಾರ ವಿಧಾನ ಪರಿಷತ್ ಉಪ ಸಭಾಪತಿಗಳಿಗೆ ಸಭಾಪತಿ ರಾಜೀನಾಮೆ ಸಲ್ಲಿಸಬೇಕಾಗಿದೆ. ಆದರೆ ಸದ್ಯ ಉಪ ಸಭಾಪತಿ ಸ್ಥಾನ ಖಾಲಿ ಇರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿಗೆ ಹೊರಟ್ಟಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್ ನಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಬಸವರಾಜ ಹೊರಟ್ಟಿ ಈ ವಾರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

- Advertisement -

Latest News

error: Content is protected !!