ಬೆಂಗಳೂರು: ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಮೂರು ಶಿಕ್ಷಕರ ಕ್ಷೇತ್ರಗಳು ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮೇ 16 ನಾಮಪತ್ರ ಸಲ್ಲಿಕೆಗೆ ಕೊ‌ನೆಯ ದಿನಾಂಕವಾಗಿದೆ.

ಮೇ 9 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಮೇ 20 ನಾಮಪತ್ರ ವಾಪಸಾತಿಗೆ ಕೊನೆಯ ದಿನಾಂಕವಾಗಿದೆ.ಜೂನ್ 3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜೂನ್ 6 ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ನೈಋತ್ಯ ಪದವೀಧರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಗಳು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳು ಮತ್ತು ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಹೊನ್ನಾಳಿ ತಾಲೂಕುಗಳ ವ್ಯಾಪ್ತಿಯನ್ನು ಒಳಗೊಂಡಿವೆ.